ತವರು ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಬಿಗ್ ಶಾಕ್: ಎಐಸಿಸಿ ಅಧ್ಯಕ್ಷರ ಆಪ್ತ ಬಿಜೆಪಿ ಸೇರ್ಪಡೆ!
ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
ಲೋಕಸಭೆ ಚುನಾವಣೆಗೆ ದೇಶದಲ್ಲಿ ಅಖಾಡ ಸಿದ್ದವಾಗುತ್ತಿದೆ. ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಹಣಿಯಲು ವಿರೋಧ ಪಕ್ಷಗಳು ಒಂದಾಗಿ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿವೆ. ಈ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ತವರು ಕ್ಷೇತ್ರದಲ್ಲೇ ಬಿಗ್ ಶಾಕ್ ನೀಡಲಾಗಿದೆ. ಅದು ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬುಧವಾರ ಬೆಳಿಗ್ಗೆ 11:30ಕ್ಕೆ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಂಸದ ಎಸ್. ಮುನಿಸ್ವಾಮಿ, ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ದಲಿತ ಸಮುದಾಯದ ನಾಯಕರಾಗಿರುವ ರುದ್ರಯ್ಯ ಅವರು ನೀರಾವರಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 2023ರ ವಿಧಾನಸಭಾ ಚುನಾವಣೆ ವೇಳೆ ಲಿಂಗಸೂಗೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದರು.
ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರಣ ಪಕ್ಷೇತರರಾಗಿ ಸ್ಫರ್ದಿಸಿದ್ದರು. ಇನ್ನು ತಮಗೆ ಟಿಕೆಟ್ ತಪ್ಪಲು ಮಲ್ಲಿಕಾರ್ಜುನ್ ಖರ್ಗೆ ಅವರೇ ಕಾರಣ ಎಂದು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ ಮಾತುಗಳು ಕೇಳಿಬಂದಿದ್ದವು. ಆದರೆ ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುವುದು ಖಚಿತಪಡಿಸಿರಲಿಲ್ಲ. ಇದೀಗ ಕಮಲಪಾಳಯ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


