ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಸಚಿವ ಚೆಲುವರಾಯಸ್ವಾಮಿ
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.

ಮದ್ದೂರು: ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು..
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಅಂತಿಮವಾಗಿದೆ. ಇಷ್ಟರಲ್ಲೇ ಪಕ್ಷದ ವರಿಷ್ಠರು ಘೋಷಣೆ ಮಾಡಲಿದ್ದಾರೆ’ ಎಂದು ಹೇಳಿದರು.
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸ್ಪರ್ದಿಸುವ ಸಾಧ್ಯತೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆ ಬಗ್ಗೆ ಗೊತ್ತಿಲ್ಲ. ಯಾರೇ ಸ್ಪರ್ಧಿಸಿದರೂ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂಬುದಕ್ಕೆ ಉತ್ತರಿಸಿದ ಅವರು, ‘ಅವರು ಆ ರೀತಿ ಏಕೆ ಹೇಳಿಕೆ ಕೊಟ್ಟಿದ್ದಾರೆಯೋ ಗೊತ್ತಿಲ್ಲ, ಪಕ್ಷದೊಳಗೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಅವೆಲ್ಲಾ ಮುಂದಿನ ದಿನಗಳಲ್ಲಿ ಬಗೆಹರಿಯುತ್ತವೆ’ ಎಂದರು.
ಇದೇ ವೇಳೆ ಸಂಸದೆ ಸುಮಲತಾ ಅಂಬರೀಷ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಮಾತನಾಡಿದ ಅವರು, ಈ ಬಗ್ಗೆ ‘ನನಗೇನು ಗೊತ್ತಿಲ್ಲ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


