ಮೋದಿ ಫ್ಯಾಕ್ಟರ್ ನಿಂದ ಲೋಕಸಭೆ ಚುನಾವಣೆಗೂ ಮುನ್ನವೇ I.N.D.I.A ಮೈತ್ರಿಕೂಟ ವಿಧ್ರ: ಭೂಪೇಂದರ್ ಯಾದವ್
ಲೋಕಸಭೆ ಚುನಾವಣೆ ಘೋಷಣೆಯಾಗುವ ಕಾಂಗ್ರೆಸ್ ನೇತೃತ್ವದ ವಿಪಕ್ಷ ಮೈತ್ರಿಕೂಟ ಐಎನ್‌ಡಿಐಎ ಬಣ ವಿಧ್ರಗೊಳ್ಳಲು ಆರಂಭಿಸಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಟೀಕಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುವ ಕಾಂಗ್ರೆಸ್ ನೇತೃತ್ವದ ವಿಪಕ್ಷ ಮೈತ್ರಿಕೂಟ ಐಎನ್‌ಡಿಐಎ ಬಣ ವಿಧ್ರಗೊಳ್ಳಲು ಆರಂಭಿಸಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಟೀಕಿಸಿದ್ದಾರೆ.
ನಗರದಲ್ಲಿ ಶನಿವಾರ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಹಲವು ವರ್ಷಗಳಿಂದ ಅಲ್ಪಸಂಖ್ಯಾತರ ಓಲೈಕೆಯನ್ನು ಮುಂದುವರೆಸಿದೆ. ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಿಂದ ತುಷ್ಟೀಕರಣ ರಾಜಕಾರಣ ಮಾಡದೆ ಉತ್ತಮ ಆಡಳಿತ ನಡೆಸಿರುವುದು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದಿಂದ ಪಕ್ಷಗಳು ದೂರವಾಗಲು ಕಾರಣವಾಗಿದೆ ಎಂದರು.
"ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಗೆ ಬಾಗಿಲು ಮುಚ್ಚಿದ್ದಾರೆ. ಮೈತ್ರಿ ಪಾಲುದಾರ ಜೆಡಿಯು ಬಿಹಾರದಲ್ಲಿ ಅದರಿಂದ ಓಡಿಹೋಗುತ್ತಿದೆ ಮತ್ತು ಕೇರಳದಲ್ಲಿ ಕಮ್ಯುನಿಸ್ಟರು ಬೇರ್ಪಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲುವ ಮೂಲಕ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಕರ್ನಾಟಕಕ್ಕೆ ನೀಡಬೇಕಿರುವ ಜಿಎಸ್‌ಟಿ ಪರಿಹಾರವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಅವರು, 2014 ರವರೆಗೆ ರಾಜ್ಯಕ್ಕೆ 11 ಸಾವಿರ ಕೋಟಿ ರೂ. ಮತ್ತು 2023 ರಲ್ಲಿ ಮೋದಿ ಸರ್ಕಾರ 30,000 ಕೋಟಿ ರೂ.ಗಳನ್ನು ಮಂಜೂರು ಮಾಡಿತು, ಆದರೆ ರಾಜ್ಯ ಸರ್ಕಾರ ಅದನ್ನು ಬಳಸಿಕೊಂಡಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ: ಬಿಜೆಪಿ ಕಾರ್ಯಕಾರಿಣಿ ಸಭೆ: ಲೋಕಸಭೆ ಚುನಾವಣೆಯಲ್ಲಿ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ- ವಿಜಯೇಂದ್ರ
ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕರಿಸಿದಂತೆಯೇ ಕರ್ನಾಟಕದಲ್ಲಿ ಕಾಂಗ್ರೆಸ್ ನ್ನು ಬೇರುಸಹಿತ ಕಿತ್ತುಹಾಕಲು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅದರ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಗ್ಯಾರಂಟಿ ವಿಫಲತೆ ಕುರಿತು ಜಾಗೃತಿ ಮೂಡಿಸಲು ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


