ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ
ರಾಧಾ ಮೋಹನ್ ದಾಸ್ ಅಗರವಾಲ್ ಉಸ್ತುವಾರಿಯಾಗಿ, ಸುಧಾಕರ್ ರೆಡ್ಡಿ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದಾರೆ.

ನವದೆಹಲಿ: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ನೇಮಕ ಮಾಡಲಾಗಿದೆ.ಈವರೆಗೂ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು.
ಈ ಬಿಜೆಪಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಧಾ ಮೋಹನ್ ದಾಸ್ ಅಗರವಾಲ್ ಉಸ್ತುವಾರಿಯಾಗಿ, ಸುಧಾಕರ್ ರೆಡ್ಡಿ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದಾರೆ.
ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿದ್ದರು. ಇದೀಗ ಅವರನ್ನು ಅರುಣ್ ಸಿಂಗ್ ಜಾಗದಲ್ಲಿ ನೂತನ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಉತ್ತರ ಪ್ರದೇಶದ ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದ, ಅಗರ್ವಾಲ್ ಸದ್ಯ ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ವೃತ್ತಿಯಲ್ಲಿ ಅಗರ್ವಾಲ್ ವೈದ್ಯರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



