ಚನ್ನಪಟ್ಟಣ ಉಪ ಚನಾವಣೆ: ಸ್ಥಳೀಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಜೊತೆ ಕುಮಾರಸ್ವಾಮಿ ಚರ್ಚೆ
ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ, ಚನ್ನಪಟ್ಟಣ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ಸೇರಿದಂತೆ ಜೆಡಿಎಸ್ -ಬಿಜೆಪಿ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು.

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಪಕ್ಷದ ಕಾರ್ಯಕರ್ತರು, ಮುಖಂಡರ ಜತೆ ಸಮಾಲೋಚನೆ ನಡೆಸಿದರು.
ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ, ಅಭ್ಯರ್ಥಿ ಆಯ್ಕೆ ಸೇರಿದಂತೆ ಜೆಡಿಎಸ್ -ಬಿಜೆಪಿ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು.
ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಅಭ್ಯರ್ಥಿ ಯಾರೇ ಆದರೂ ಅವರು ಎನ್ ಡಿಎ ಅಭ್ಯರ್ಥಿ ಆಗಿರುತ್ತಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ನಮ್ಮೆಲ್ಲರ ಗುರಿ ಆಗಬೇಕು ಎಂದು ಮುಖಂಡರಿಗೆ ಹೇಳಿದರು.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಪ್ರಮುಖ ಮುಖಂಡರೆಲ್ಲ ಹೋಗಿ ಖುದ್ದು ಭೇಟಿ ಮಾಡಿ ಮುಕ್ತವಾಗಿ ಚರ್ಚಿಸಿ ಎಂದು ಮುಖಂಡರಿಗೆ ಸೂಚಿಸಿದ ಕುಮಾರಸ್ವಾಮಿ, ಯೋಗೇಶ್ವರ ಅವರನ್ನು ಎಲ್ಲಾ ಹಂತಗಳಲ್ಲಿಯೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಅವರ ಮಾರ್ಗದರ್ಶನ ಪಡೆಯಬೇಕು ಎಂದು ತಿಳಿಸಿದರು.
ಮುಂದಿನ ವಾರ ನಾನು ಮತ್ತೆ ಬೆಂಗಳೂರಿಗೆ ಬರುತ್ತೇನೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಹಾಗೂ ಬಿಜೆಪಿಯ ರಾಜ್ಯ, ರಾಷ್ಟ್ರೀಯ ನಾಯಕರ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವರು ಹೇಳಿದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ನಾಯಕರು, ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




