ಅಭಿನಂದನಾ ಸಮಾರಂಭ ನಾನು ಆಯೋಜಿಸಿಲ್ಲ, ನನಗೂ ಅದಕ್ಕೂ ಸಂಬಂಧವಿಲ್ಲ: ಸಂಸದ ಕೆ. ಸುಧಾಕರ್
ಸಾರ್ವಜನಿಕವಾಗಿ ಮದ್ಯ ಹಂಚುವುದು ಅಪರಾಧವಾಗಿದ್ದು, ಅಕ್ಷಮ್ಯವಾಗಿದೆ. ನನ್ನ 20 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ಮದ್ಯ ವಿತರಿಸಿಲ್ಲ. ನಾನು ಸನ್ಮಾನ ಕಾರ್ಯಕ್ರಮ ಆಯೋಜಿಸಿಲ್ಲ ಎಂದಿದ್ದಾರೆ.

ಕೋಲಾರ: ನೆಲಮಂಗಲದಲ್ಲಿ ಭಾನುವಾರ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಂಡಿದ್ದವರಿಗೆ ಉಚಿತ ಮಾಂಸಾಹಾರ, ಸಾರಾಯಿ, ಮದ್ಯ ವಿತರಿಸಲಾಯಿತು. ಈ ಘಟನೆಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುಧಾಕರ್ ವಿರುದ್ಧ ಟೀಕೆ ವ್ಯಕ್ತವಾಗಿದೆ.
ಈ ನಡುವೆ ಸಂಸದ ಸುಧಾಕರ್ ಪ್ರತಿಕ್ರಿಯಿಸಿದ್ದು, ನಾನು ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿಲ್ಲ ಅಥವಾ ಅದರ ಭಾಗವೂ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಸಾರ್ವಜನಿಕವಾಗಿ ಮದ್ಯ ಹಂಚುವುದು ಅಪರಾಧವಾಗಿದ್ದು, ಅಕ್ಷಮ್ಯವಾಗಿದೆ. ನನ್ನ 20 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ಮದ್ಯ ವಿತರಿಸಿಲ್ಲ. ನಾನು ಸನ್ಮಾನ ಕಾರ್ಯಕ್ರಮ ಆಯೋಜಿಸಿಲ್ಲ ಎಂದಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಆಹ್ವಾನದ ಮೇರೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಮತ್ತು ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಲ ಸಮಯದ ನಂತರ ವಾಪಸಾದೆವು. ಆ ನಂತರ ಬೆಳವಣಿಗೆಗಳು ನಡೆದಿವೆ ಎಂದರು. ನಾನು ಈ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ, ಆದರೆ ಮದ್ಯವನ್ನು ಯಾರು ವಿತರಿಸಿದರು ಎಂಬುದು ನನಗೆ ತಿಳಿದಿಲ್ಲ. ನಾನು ಸ್ಥಳೀಯ ಮುಖಂಡರನ್ನು ಕರೆದು ಈ ರೀತಿ ಮಾಡಬಾರದಿತ್ತು ಎಂದು ಹೇಳಿದ್ದೇನೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



