ರಾಜಕೀಯ

ಸುಧಾಕರ್‌ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ: ಜಗದೀಶ್ ಚೌಧರಿ 6 ವರ್ಷ BJPಯಿಂದ ಉಚ್ಚಾಟನೆ

ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಘಟನೆ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು.

ಸುಧಾಕರ್‌ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ: ಜಗದೀಶ್ ಚೌಧರಿ 6 ವರ್ಷ BJPಯಿಂದ ಉಚ್ಚಾಟನೆ
ಡಾ.ಕೆ.ಸುಧಾಕರ್‌ ಗೆಲುವು ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಹಾಜರಿದ್ದವರು ಮದ್ಯ ಸಂಗ್ರಹಿಸಿದರು.
Published On :

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಿಸಿದ ಆರೋಪದ ಮೇಲೆ ನೆಲಮಂಗಲದ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಕ್ಕಾಗಿ ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ಜಗದೀಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಹೇಳಿದರು.

ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಘಟನೆ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು. ಅಲ್ಲದೇ, ಎಣ್ಣೆಗಾಗಿ ಸಾರ್ವಜನಿಕರು ಸಹ ಮುಗಿಬಿದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆಗಳು ವ್ಯಕ್ತವಾಗಿದ್ದವು.

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಜಗದೀಶ್ ಚೌಧರಿ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.