ರಾಜಕೀಯ

ರಾಜ್ಯದ ಇಂಜಿನೀಯರ್ ಗಳು ಮನೆ ಹಾಳರು: ತಮ್ಮ ಹೇಳಿಕೆಗೆ ಅಶೋಕ ಕ್ಷಮೆ ಕೇಳಲಿ- ಡಿ.ಕೆ ಶಿವಕುಮಾರ್

ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಕ್ಷೇತ್ರ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ದೇಶದ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಕರೆದಿರುವುದು ಸರಿಯಲ್ಲ ಎಂದರು.

ರಾಜ್ಯದ ಇಂಜಿನೀಯರ್ ಗಳು ಮನೆ ಹಾಳರು: ತಮ್ಮ ಹೇಳಿಕೆಗೆ ಅಶೋಕ ಕ್ಷಮೆ ಕೇಳಲಿ- ಡಿ.ಕೆ ಶಿವಕುಮಾರ್
ಡಿಕೆ ಶಿವಕುಮಾರ್-ಆರ್ ಅಶೋಕ್
Published On :

ಬೆಂಗಳೂರು: ರಾಜ್ಯದ ಎಂಜಿನಿಯರ್‌ಗಳನ್ನು ಮನೆಹಾಳರು ಎಂದು ವಿಧಾನಸಭೆಯಲ್ಲಿ ನಿಂದಿಸಿರುವ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರು ತಕ್ಷಣ ಎಂಜಿನಿಯರ್‌ಗಳ ಕ್ಷಮೆ ಕೇಳಬೇಕು. ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕರ್ನಾಟಕ ಎಂಜಿನಿಯರ್‌ಗಳ ಸಂಘದ ಗೌರವ ಅಧ್ಯಕ್ಷ ದೇವರಾಜ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಡಿ.ಕೆ. ಶಿವಕುಮಾರ್‌ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ, ತಮ್ಮ ಹೇಳಿಕೆಯನ್ನು ಅಶೋಕ ಅವರು ಹಿಂತೆಗೆದುಕೊಳ್ಳುವಂತೆ ಒತ್ತಡ ತರಬೇಕೆಂದು ಮನವಿ ಮಾಡಿದರು.

ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಕ್ಷೇತ್ರ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ದೇಶದ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಕರೆದಿರುವುದು ಸರಿಯಲ್ಲ ಎಂದರು. ಅಶೋಕ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಡಿ.ಕೆ. ಶಿವಕುಮಾರ್‌, ಎಂಜಿನಿಯರ್‌ಗಳನ್ನು ಅವಹೇಳನ ಮಾಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.