ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ; ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ಹೆಚ್.ಕೆ. ಪಾಟೀಲ್ ಮತ್ತಿತರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಸುಮಾರು ಒಂದು ಗಂಟೆ ಕಾಲ ಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆಸಲಾಯಿತು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ಹೆಚ್.ಕೆ. ಪಾಟೀಲ್ ಮತ್ತಿತರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆಸಲಾಯಿತು.
ಇಂದು ನಡೆಯುವ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಶಾಸಕರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದರು. ಒಂದು ವೇಳೆ ಜೂನ್ 13ರಂದು ಚುನಾವಣೆ ನಡೆದರೆ, ಮತದಾನ ಮಾಡಲು ಶಾಸಕರು ಆಗಮಿಸಬೇಕು ಎಂದು ಸಿಎಂ ಸೂಚನೆ ನೀಡಿದರು.
ಸಚಿವ ಬಿ. ನಾಗೇಂದ್ರ ಗೈರು: ವಾಲ್ಮೀಕಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಸಭೆಗೆ ಗೈರಾಗಿದ್ದರು.
ಇದೇ ವೇಳೆ ಲೋಕಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಬಗ್ಗೆಯೂ ಚರ್ಚೆ ನಡೆದಿದ್ದು, ಯಾರೂ ಭಯಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ ನಾವು ಎರಡಂಕಿ ಪಡೆಯುತ್ತೇವೆ. ಎಲ್ಲರೂ ಚುನಾವಣೆಯಲ್ಲಿ ಸಕ್ರಿಯರಾಗಿ ಕೆಲಸ ಮಾಡಿದ್ದೇವೆ. ನಾವು 20 ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಶಾಸಕರು, ಸಚಿವರುಗಳಿಗೆ ಸಿಎಂ ಹಾಗೂ ಡಿಸಿಎಂ ಅಭಯ ನೀಡಿದರು ಎನ್ನಲಾಗಿದೆ.
ಸಭೆ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂದು ನಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು, ಎಲ್ಲಾ ಶಾಸಕರ ಸಹಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



