ರಾಜಕೀಯ

2 ಲಕ್ಷ ಮತಗಳ ಅಂತರದಿಂದ ಡಾ.ಮಂಜುನಾಥ್ ಗೆಲುವು ಖಚಿತ: ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ; ಮುನಿರತ್ನ

ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

2 ಲಕ್ಷ ಮತಗಳ ಅಂತರದಿಂದ ಡಾ.ಮಂಜುನಾಥ್ ಗೆಲುವು ಖಚಿತ: ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ; ಮುನಿರತ್ನ
ಶಾಸಕ ಮುನಿರತ್ನ
Published On :

ಬೆಂಗಳೂರು: ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಧ್ಯಾಹ್ನ ಒಂದು ಗಂಟೆ ವೇಳೆ ಅದು ಮೂರು ಪಟ್ಟು ಹೆಚ್ಚಾಗುತ್ತದೆ ದೊಡ್ಡಮಟ್ಟದ ಲೀಡ್ ನಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂಜಿದೆಗ ಮಾತನಾಡಿದ ಮುನಿರತ್ನ, ಬೆಂಗಳೂರು ಗ್ರಾಮಾಂತರದಲ್ಲಿ ಡಾ ಮಂಜುನಾಥ ಗೆಲುವು ನಿಶ್ಚಿತ. ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣದಲ್ಲಿ ನಮ್ಮ ಪಕ್ಷದ ಶಕ್ತಿ ಹೆಚ್ಚಿದೆ. ಈಗಾಗಲೇ ಅರ್ಧ ಮತ ಎಣಿಕೆ ಮುಗಿದಿದೆ.ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ ಅವರ 2 ಲಕ್ಷ ಮತಗಳ ಅಂತರದಿಂದ ಗೆಲ್ಲತ್ತಾರೆ. ಹೀಗಾಗಿ ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ ಎಂದು ಹೇಳಿದ್ದಾರೆ.

ಈ ಹಿಂದೆಯೇ ಚುನಾವಣಾ ಆಯೋಗಕ್ಕೆ ನಾವು ಮನವಿ ಮಾಡಿದ್ದೇವೆ. ಸ್ವತಃ ಡಾ ಮಂಜುನಾಥ ಅವರು ಕೂಡ ಶಾಂತಿ ಕಾಪಾಡಲು ಭದ್ರತೆ ಕೈಗೊಳ್ಳುವಂತೆ ಮನವಿ ಮಾಡಿದ್ದರು ಎಂದರು. ಇದೀಗ ಮಂಜುನಾಥ ಅವರು ಭಾರೀ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಗೆಲುವು ಸಾಧಿಸಲಿರುವ ಹಿನ್ನೆಲೆ ಬಿಜೆಪಿ ಕಚೇರಿಗೆ ಕಾರ್ಯಕರ್ತರು ಜಮಾವಣೆ ಆಗುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಕಾರ್ಯಕರ್ತರು ಹೆಚ್ಚುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.