ರಾಜಕೀಯ

Election Results 2024 Live Updates: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ ಗೆಲುವು

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ ಗೆಲುವು ಸಾಧಿಸಿದ್ದಾರೆ.

Election Results 2024 Live Updates: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ ಗೆಲುವು
ಪಿ ಸಿ ಗದ್ದೀಗೌಡರ್ ಮತ್ತು ಸಂಯುಕ್ತಾ ಪಾಟೀಲ್
Published On :

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ ಗೆಲುವು ಸಾಧಿಸಿದ್ದಾರೆ.

ಗದ್ದಿಗೌಡರ್ ಅವರು 54221 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗದ್ದಿಗೌಡರ್ ಅವರಿಗೆ ಒಟ್ಟಾರೆ 5,12,289 ಮತಗಳು ಲಭಿಸಿದ್ದು, ಸಂಯುಕ್ತಾ ಅವರಿಗೆ 4,58,068 ಮತಗಳು ಲಭಿಸಿವೆ.

ಉತ್ತರ ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿತ್ತು. ಲಿಂಗಾಯತ ಸಮುದಾಯದ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯಿಂದ ಲಿಂಗಾಯತ ಅಭ್ಯರ್ಥಿಗಳೇ ಸ್ಪರ್ಧಿಸಿರುವುದು ಪೈಪೋಟಿಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಐದನೇ ಬಾರಿ ಆಯ್ಕೆ ಬಯಸಿ ಬಿಜೆಪಿಯಿಂದ ಪಿಸಿ ಗದ್ದಿಗೌಡರ್‌ ಅವರು ಸ್ಪರ್ಧಿಸಿದ್ದರು. ಮೊದಲ ಬಾರಿ ಸಂಯುಕ್ತಾ ಪಾಟೀಲ್‌ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಸಚಿವ ಶಿವಾನಂದ ಪಾಟೀಲ್‌ ಅವರ ಪುತ್ರಿಯೂ ಆಗಿರುವ ಸಂಯುಕ್ತಾ ಪಾಟೀಲ್‌ ಪಿಸಿ ಗದ್ದಿಗೌಡರ್‌ ಅವರಿಗೆ ತುರುಸಿನ ಪೈಪೋಟಿ ನೀಡಿದ್ದರು. ಆದರೆ, ಕೊನೆಗೂ ಗದ್ದಿಗೌಡರ್ ಅವರು 54221 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.