ರಾಜಕೀಯ

Election Results 2024 Live Updates: ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಗೆಲುವು

ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಮಾಜಿ ಸಚಿವ ಡಾ. ಕೆ ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ.

Election Results 2024 Live Updates: ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಗೆಲುವು
ಮೈಸೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್
Published On :

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಮಾಜಿ ಸಚಿವ ಡಾ. ಕೆ ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯುಂಟಾಗಿದೆ.

ಸುಧಾಕರ್ ಅವರು ರಕ್ಷಾ ರಾಮಯ್ಯ ವಿರುದ್ಧ 1,12,866 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಸುಧಾಕರ್ ಅವರಿಗೆ ಒಟ್ಟಾರೆ 5,89,918 ಮತಗಳು ಸಿಕ್ಕಿದ್ದು, ರಕ್ಷಾ ರಾಮಯ್ಯ ಅವರಿಗೆ 4,77,052 ಮತಗಳು ಸಿಕ್ಕಿವೆ.

1962ರಿಂದ ಚಿಕ್ಕಬಳ್ಳಾಪುರ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿಯಿಂದ ಎರಡು ಬಾರಿ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿತ್ತು. ಈ ಬಾರಿ ಮತ್ತೆ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಶತಾಯಗತಾಯ ಯತ್ನ ನಡೆಸಿದಾತರೂ ಕ್ಷೇತ್ರ ಕೊನೆಗೂ ಕಮಲಪಾಳಯದ ಪಾಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.