Election Results 2024 Live Updates: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಗೆಲುವು ಸಾಧಿಸಿದ್ದಾರೆ.
ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ವಿರುದ್ಧ 42,046 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಚಂದ್ರಪ್ಪ ಅವರಿಗೆ ಒಟ್ಟಾರೆ 62,0194 ಮತಗಳು ಸಿಕ್ಕಿದ್ದು, ಗೋವಿಂದ ಕಾರಜೋಳ ಅವರಿಗೆ 6,62,240 ಮತಗಳು ಸಿಕ್ಕಿವೆ.
ಏಪ್ರಿಲ್ 26ರಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆಯ ಮತದಾನ ನಡೆದಿದ್ದು, ಈ ಬಾರಿಯ ಲೋಕ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಹಾಗೂ ಎನ್‌ಡಿ ಎ. ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಮತದಾನ ನಡೆದು ಬರೋಬ್ಬರಿ 38 ದಿನಗಳು ಕಳೆದಿದ್ದು ಇಂದು ಫಲಿತಾಂಶ ಹೊರಬಿದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



