ರಾಜಕೀಯ

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಗೆಲುವು
ಚಂದ್ರಶೇಖರ ಪಾಟೀಲ
Published On :

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಲಬುರಗಿ ನಗರದ ಗುಲಬರ್ಗಾ ವಿ.ವಿ.ಯ ಸಾದ್ವಿ ಶಿರೋಮಣಿ ಸಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭವಾದ ಮತ ಎಣಿಕೆ ಕಾರ್ಯ ಶುಕ್ರವಾರ ಬೆಳಿಗ್ಗೆ 11 ಗಂಟೆ ವರೆಗೂ ನಿರಂತರವಾಗಿ ನಡೆಯಿತು.

ಕೊನೆಯದಾಗಿ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ನಂತರ ವಿನ್ನಿಂಗ್ ಕೋಟಾ ತಲುಪದಿದ್ದರೂ ಕೊನೆಯ ಇಬ್ಬರು ಸ್ಪರ್ಧಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚಿನ ಮತ ಪಡೆದ ಕಾರಣ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಅವರು ಡಾ. ಚಂದ್ರಶೇಖರ ಪಾಟೀಲ ಅವರಿಗೆ ಗೆಲುವಿನ ಪ್ರಮಾಣ ಪತ್ರ‌ ವಿತರಿಸುವ ಮೂಲಕ ಅಧಿಕೃತವಾಗಿ ಫಲಿತಾಂಶವನ್ನು ಘೋಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.