ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ.ಜಗದೀಶ್ ಆರು ವರ್ಷ ಉಚ್ಛಾಟನೆ
ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ವಜಾಗೊಳಿಸಿದೆ.

ಬೆಂಗಳೂರು: ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕರ್ನಾಟಕ ಪ್ರದೇ SM Jagadishಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ವಜಾಗೊಳಿಸಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಬೇರೆ ಪಕ್ಷದ ಅಭ್ಯರ್ಥಿಯೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವುದು ಹಾಗೂ ಪಕ್ಷದ ನಾಯಕರ ಬಗ್ಗೆ,ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಕಂಡುಬಂದಿದ್ದು, ಪಕ್ಷ ವಿರೋಧಿ ಚಟುವಟಿಕೆಗೆಗಾಗಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



