ರಾಜಕೀಯ

ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಸಂಸದ ಇ ತುಕಾರಾಂ ರಾಜಿನಾಮೆ

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಜಯ ದಾಖಲಿಸಿದ್ದ ಕಾಂಗ್ರೆಸ್ ಸಂಸದ ಇ ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಸಂಸದ ಇ ತುಕಾರಾಂ ರಾಜಿನಾಮೆ
ಶಾಸಕ ಸ್ಥಾನಕ್ಕೆ ಸಂಸದ ಇ ತುಕಾರಾಂ ರಾಜಿನಾಮೆ
Published On :

ಬಳ್ಳಾರಿ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಜಯ ದಾಖಲಿಸಿದ್ದ ಕಾಂಗ್ರೆಸ್ ಸಂಸದ ಇ ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಹೌದು.. ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಇ ತುಕಾರಾಂ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್‌ನ ಇ. ತುಕಾರಾಮ್‌ (E Tukaram) ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.