ರಾಜಕೀಯ

ನಾಳೆ ಅರಮನೆ ಮೈದಾನದಲ್ಲಿ ಬಿಜೆಪಿ ಸಂಸದರು, ಕೇಂದ್ರ ಸಚಿವರಿಗೆ ಸನ್ಮಾನ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್‌ನ 19 ಸಂಸದರು ಮತ್ತು ಕೇಂದ್ರ ಸಚಿವರನ್ನು ಕರ್ನಾಟಕ ಬಿಜೆಪಿ ಘಟಕವು ಜೂನ್ 22ರಂದು ಸನ್ಮಾನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.

ನಾಳೆ ಅರಮನೆ ಮೈದಾನದಲ್ಲಿ ಬಿಜೆಪಿ ಸಂಸದರು, ಕೇಂದ್ರ ಸಚಿವರಿಗೆ ಸನ್ಮಾನ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
Published On :

ಬೆಂಗಳೂರು: ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್‌ನ 19 ಸಂಸದರು ಮತ್ತು ಕೇಂದ್ರ ಸಚಿವರನ್ನು ಕರ್ನಾಟಕ ಬಿಜೆಪಿ ಘಟಕವು ಜೂನ್ 22ರಂದು ಸನ್ಮಾನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ ಎಂದರು.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಈ ಕಾರ್ಯಕ್ರಮದಲ್ಲಿ ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ರಾಜ್ಯದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳನ್ನು ಗೆದ್ದಿದ್ದರೆ, ಅದರ ಮಿತ್ರಪಕ್ಷ ಜೆಡಿಎಸ್‌ಗೆ ಎರಡು ಸ್ಥಾನಗಳು ಲಭಿಸಿವೆ. ಆಡಳಿತಾರೂಢ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.