ರಾಜಕೀಯ

17 ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನ ಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

17 ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು
Published On :

ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನ ಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಡಾ.ಕೆ. ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು, ಜಗದೇವ್ ಗುತ್ತೇದಾರ್, ಎನ್.ಎಸ್.ಬೋಸರಾಜು, ಡಾ. ಯತೀಂದ್ರ ಹಾಗೂ ಎ. ವಸಂತ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಪ್ರತಿಪಕ್ಷ ಬಿಜೆಪಿಯಿಂದ ಮುಲೆ ಮಾರುತಿರಾವ್, ಸಿ.ಟಿ. ರವಿ, ಎನ್.ರವಿಕುಮಾರ್ ಹಾಗೂ ಜೆಡಿಎಸ್ ನಿಂದ ಟಿ.ಎನ್.ಜವರಾಯಿಗೌಡ ಪ್ರಮಾಣ ವಚನ ಸ್ವೀಕರಿಸಿದರು.

ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಡಾ.ಚಂದ್ರಶೇಖರ ಬಸವರಾಜ ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದ ರಾಮೋಜಿಗೌಡ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ.ಟಿ. ಶ್ರೀನಿವಾಸ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕ್ಷರ ಕ್ಷೇತ್ರದಿಂದ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದ ಕೆ. ವಿವೇಕನಾಂದ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ. ಟಿ. ಶ್ರೀನಿವಾಸ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.