ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ವೇದಿಕೆ ಮೇಲೆ ಸಿದ್ದುಗೆ ಸ್ವಾಮೀಜಿ ಮನವಿ
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.

ಬೆಂಗಳೂರು: ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದರೆ ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆಯೊಂದು ನಡೆದಿದೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.
ಇನ್ನು ವೇದಿಕೆಯಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
ಅದಾಗಲೇ ನಿಮಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದೀರಿ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಎಂದು ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿರುವುದು ಸಿದ್ದರಾಮಯ್ಯ ಅವರ ಇರಿಸು ಮುರುಸಿಗೂ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



