ವಾಲ್ಮೀಕಿ ಹಗರಣ: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜುಲೈ 3 ರಂದು ಸಿಎಂ ಮನೆಗೆ ಬಿಜೆಪಿ ಮುತ್ತಿಗೆ
ಜುಲೈ 3 ರಂದು ಬೆಂಗಳೂರಿನಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ತಿಳಿಸಿದ್ದಾರೆ.

ಶಿವಮೊಗ್ಗ: ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಜುಲೈ 3 ರಂದು ಬೆಂಗಳೂರಿನಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ತಿಳಿಸಿದ್ದಾರೆ.
ಬಿಜೆಪಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಜವಾಬ್ದಾರಿ ಹೊರಬೇಕು. ಅಲ್ಲದೆ ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ್ ದದ್ಧಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆಗ್ರಹಿಸಿದ್ದಾರೆ.
ಮೇ 26 ರಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್(52) ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ನಂತರ ನಿಗಮದ ಅಕ್ರಮ ಹಣ ವರ್ಗಾವಣೆ ವಿಷಯ ಬೆಳಕಿಗೆ ಬಂದಿದ್ದು, ನಿಗಮಕ್ಕೆ ಸೇರಿದ 187 ಕೋಟಿ ರೂಪಾಯಿಯನ್ನು ಅನಧಿಕೃತವಾಗಿ ಹಲವು ಖಾತೆಗಳಿಗೆ ವರ್ಗಾಯಿಸಲಾಗಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 193 ಬ್ಯಾಂಕ್ ಖಾತೆಗಳಿಂದ 10 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



