ರಾಜಕೀಯ

ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್

ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್
Published On :

ಬೆಂಗಳೂರು: ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.

ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಬಿಜೆಪಿ ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ಗೆ ಅಡ್ಡ ಮತದಾನ ಮಾಡಿದ ನಂತರ ಕಾಂಗ್ರೆಸ್ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಕೇವಲ ಒಂದು ಸ್ಥಾನ ಗಳಿಸಿತ್ತು. ಇದು ಕೇಸರಿ ಪಕ್ಷಕ್ಕೆ ದೊಡ್ಡ ಹಿನ್ನೆಡೆಯುಂಟುಮಾಡಿತ್ತು.

ಕೆಲ ತಿಂಗಳುಗಳಿಂದ ಪಕ್ಷದ ನಾಯಕ್ವದೊಂದಿಗೆ ಅಸಮಾಧಾನ ಹೊಂದಿದ್ದ ಎಸ್. ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್, ಕಾಂಗ್ರೆಸ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಈ ಇಬ್ಬರೂ ಶಾಸಕರು 2019ರಲ್ಲಿ ಇತರ 15 ಮಂದಿಯೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದರು.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಅಜಯ್ ಮಾಕೇನ್, ನಾಸೀರ್ ಹುಸೈನ್ ಮತ್ತು ಜಿಸಿ ಚಂದ್ರಶೇಖರ್, ಬಿಜೆಪಿಯ ನಾರಾಯಣ ಬಾಡಂಗೆ ಗೆಲುವು ಸಾಧಿಸಿದರೆ, ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಡಿ ಕುಪೇಂದ್ರ ರೆಡ್ಡಿ ಸೋಲನ್ನುಭವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.