ರಾಜಕೀಯ

ʻರಾಮೇಶ್ವರಂ ಕೆಫೆʻ ಸ್ಫೋಟ ಪ್ರಕರಣ: ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದೆ ಬಿಜೆಪಿ; ಡಿಕೆಶಿ ಕಿಡಿ

ತಮ್ಮ ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ʻರಾಮೇಶ್ವರಂ ಕೆಫೆʻ ಸ್ಫೋಟ ಪ್ರಕರಣ: ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದೆ ಬಿಜೆಪಿ; ಡಿಕೆಶಿ ಕಿಡಿ
ಡಿಕೆ.ಶಿವಕುಮಾರ್
Published On :

ಬೆಂಗಳೂರು: ತಮ್ಮ ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಬಿಜೆಪಿ ನಾಯಕರ ಹೇಳಿಕೆ ಕುರಿತು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನಿಖೆ ವಿಚಾರವಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗುತ್ತಿದೆ. ಬೆಂಗಳೂರಿನ ಗೌರವ ರಕ್ಷಣೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಹೇಳಿದರು.

ಇದರ ನಡುವೆಯೇ ಬಿಜೆಪಿ ನಾಯಕರು ಈ ವಿಚಾರವಾಗಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಇದರೊಂದಿಗೆ ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅವರು ಅಧಿಕಾರ ನಡೆಸುತ್ತಿದ್ದಾಗ ಏನೆಲ್ಲಾ ಆಗಿದೆ ಎಂಬುದನ್ನು ಮರೆತಿದ್ದಾರೆ. ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಈ ಕುರಿತು ರಾಜಕೀಯ ಮಾಡಲು ನನಗಿಷ್ಟವಿಲ್ಲ. ಇಂತಹ ಸಂದರ್ಭದಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಯ ಬಗ್ಗೆ ಅರಿವಿರಬೇಕು ಎಂದು ತಿಳಿಸಿದರು.

ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ಸಮಯ ಪ್ರಜ್ಞೆ, ತಮ್ಮ ಜವಾಬ್ದಾರಿಯ ಅರಿವಿಲ್ಲದವರು ಈ ರೀತಿ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.