ರಾಜಕೀಯ

ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ಸ್ಪರ್ಧೆ ಸಾಧ್ಯತೆ

ಬಿಜೆಪಿ ಪ್ರಬಲ ಲಿಂಗಾಯತ ಸಮುದಾಯದಿಂದ ತನ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಲೋಕಸಭಾ ಚುನಾವಣಾ ಕಣಕ್ಕಿಳಿಸುವ ಸಾಧ್ಯತೆ ಇದೆ.

ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ಸ್ಪರ್ಧೆ ಸಾಧ್ಯತೆ
ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್
Published On :

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹಲವು ತಂತ್ರಗಳನ್ನು ರೂಪಿಸುತ್ತಿರುವ ಬಿಜೆಪಿ, ಪ್ರಬಲ ಲಿಂಗಾಯತ ಸಮುದಾಯದಿಂದ ತನ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ಈ ಕುರಿತು ಸುಳಿವು ನೀಡಿದ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಬೊಮ್ಮಾಯಿ, ಶೆಟ್ಟರ್ ಸೇರಿದಂತೆ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ನಡೆದಿದೆ. ಆದರೆ ಇನ್ನೂ ಅಂತಿಮವಾಗಿಲ್ಲ ಎಂದಿದ್ದಾರೆ.

ನಿನ್ನೆ, ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ನಾನು ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳ ಕುರಿತು ಚರ್ಚಿಸಿದ್ದೇವೆ. ಆದರೆ, ಇಲ್ಲಿಯವರೆಗೆ ಯಾವುದನ್ನೂ ಅಂತಿಮಗೊಳಿಸಿಲ್ಲ. ಪ್ರಧಾನಿಯೊಂದಿಗೆ ಚರ್ಚಿಸಿದ ನಂತರ ಅವರು ಕೆಲವು ತೀರ್ಮಾನಕ್ಕೆ ಬರುತ್ತಾರೆ. ಮುಂದಿನ 2-3 ದಿನಗಳಲ್ಲಿ ಎಲ್ಲವನ್ನೂ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೇಳಿದ್ದಾರೆ.

ಬಿಜೆಪಿಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ ಎರಡು-ಮೂರು ಸ್ಥಾನಗಳನ್ನು ನೀಡಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ರಾಷ್ಟ್ರೀಯ ನಾಯಕತ್ವ ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ದೇಶಾದ್ಯಂತ ಒಟ್ಟು 543 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ಈಗಾಗಲೇ 195 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.