ರಾಜಕೀಯ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಸ್ಥಾನಗಳಲ್ಲಿ ಗೆಲ್ಲುತ್ತೇವೆ: ಬಿಎಸ್ ಯಡಿಯೂರಪ್ಪ

ಲೋಕಸಭೆ ಚುನಾವಣೆಗೆ ಮುನ್ನ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಸ್ಥಾನಗಳಲ್ಲಿ ಗೆಲ್ಲುತ್ತೇವೆ: ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Published On :

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ನಿನ್ನೆ, ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ನಾನು ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳ ಕುರಿತು ಚರ್ಚಿಸಿದ್ದೇವೆ. ಆದರೆ, ಇಲ್ಲಿಯವರೆಗೆ ಯಾವುದನ್ನೂ ಅಂತಿಮಗೊಳಿಸಿಲ್ಲ. ಪ್ರಧಾನಿಯೊಂದಿಗೆ ಚರ್ಚಿಸಿದ ನಂತರ ಅವರು ಕೆಲವು ತೀರ್ಮಾನಕ್ಕೆ ಬರುತ್ತಾರೆ. ಮುಂದಿನ 2-3 ದಿನಗಳಲ್ಲಿ ಎಲ್ಲವನ್ನೂ ಅಂತಿಮಗೊಳಿಸಲಾಗುವುದು ಎಂದು ನಾನು ಭಾವಿಸುತ್ತೇನೆ. 28ರಲ್ಲಿ 24 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದು ನನಗೆ ಶೇ 100 ರಷ್ಟು ವಿಶ್ವಾಸವಿದೆ. ನಾವು ನಮ್ಮೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಕರ್ನಾಟಕದ 28 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿರ್ಧರಿಸಲು ಬುಧವಾರ, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಸಿತು.

ಮಾರ್ಚ್ 2 ರಂದು 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಎರಡೂ ಪಕ್ಷಗಳು ತಲಾ ಒಂದು ಸ್ಥಾನವನ್ನು ಮಾತ್ರ ಗೆದ್ದಿವೆ.

ಈಮಧ್ಯೆ, ಕಾಂಗ್ರೆಸ್‌ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಮಾರ್ಚ್ 7ರಂದು ದೆಹಲಿಯಲ್ಲಿ ಸಭೆ ನಡೆಸುತ್ತಿದ್ದು, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದರು.

2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು. ಈ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.