‘ಅಜ್ಜಿಗೆ ಅರಿವೆ ಚಿಂತೆಯಾದ್ರೆ’.. ಸಿದ್ದು ಸರ್ಕಾರ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದೆ: ಸಿಎಂ ವಿರುದ್ಧ ಬಿಜೆಪಿ ಕಿಡಿ
ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಜಲ ಕ್ಷಾಮದ ಸೂತಕ ಮನೆ ಮಾಡಿದ್ದರೆ, ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಉತ್ಸವದ ಸಂಭ್ರಮದಲ್ಲಿದೆ ಎಂದು ಹರಿಹಾಯ್ದಿದ್ದಾರೆ.
ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ನವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ.
ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ.
ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ ಒಂದು ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಎರಡು ಕೋಟಿ ಖರ್ಚು ಮಾಡಿ ಉತ್ಸವ ಮಾಡುತ್ತಿದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ?
ಗ್ಯಾರೆಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಬಹುದಿತ್ತಲ್ಲ? ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೂಡಬಹುದಿತ್ತಲ್ಲವೆ? ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಪ್ರಚಾರವೇ ಹೆಚ್ಚಾಗಿ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರೇವಣ್ಣ ನೇಮಕ; 44 ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಗೂ ಸಿಎಂ ಅಸ್ತು
ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಈ ಕಾರ್ಯಕ್ರಮಕ್ಕೆ ಹಾಜರಾಗುವ ಜನರಿಗೆ ಊಟ, ವಸತಿ, ಪೆಂಡಾಲು ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿವರಿಸಲಾಗಿದೆ. ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಕಾರ್ಯಕ್ರಮಗಳಿಗಾಗಿ ಪ್ರತಿ ತಾಲ್ಲೂಕಿಗೆ 50 ಲಕ್ಷ ರೂ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ 1 ಕೋಟಿ ರೂ. ಹಾಗೂ ಸಿಎಂ, ಡಿಸಿಎಂ ಭಾಗವಹಿಸುವ ಕಾರ್ಯಕ್ರಮಗಳಿಗೆ 2 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಈ ಕಾರ್ಯಕ್ರಮಕ್ಕೆ ಹಾಜರಾಗುವ ಜನರಿಗೆ ಊಟ, ವಸತಿ, ಪೆಂಡಾಲು ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿವರಿಸಲಾಗಿದೆ. ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಕಾರ್ಯಕ್ರಮಗಳಿಗಾಗಿ ಪ್ರತಿ ತಾಲ್ಲೂಕಿಗೆ 50 ಲಕ್ಷ ರೂ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ 1 ಕೋಟಿ ರೂ. ಹಾಗೂ ಸಿಎಂ, ಡಿಸಿಎಂ ಭಾಗವಹಿಸುವ ಕಾರ್ಯಕ್ರಮಗಳಿಗೆ 2 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


