ಚಾಮರಾಜನಗರಕ್ಕೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ: ಸಿಎಂ ಸಿದ್ದರಾಮಯ್ಯ
ನಾನು ಈ ಹಿಂದೆ ಚಾಮರಾಜನಗರಕ್ಕೆ 12 ಬಾರಿ ಬಂದಿದ್ದೇನೆ. ಚಾಮರಾಜನಗರಕ್ಕೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರ: ನಾನು ಈ ಹಿಂದೆ ಚಾಮರಾಜನಗರಕ್ಕೆ 12 ಬಾರಿ ಬಂದಿದ್ದೇನೆ. ಚಾಮರಾಜನಗರಕ್ಕೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇಂದು ಎರಡನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಡಾ.ಅಂಬೇಡ್ಕರ್ ಮೈದಾನದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ. ಯಾಕೆ ಚಾಮರಾಜನಗರದವರು ಮನುಷ್ಯರಲ್ವಾ ಎಂದು ಪ್ರಶ್ನಿಸಿದ ಸಿಎಂ, ‘ನಾನು ಈ ಹಿಂದೆ 12 ಬಾರಿ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದೆ. ಈ ಭಾರಿ ಸರ್ಕಾರ ರಚನೆಯಾದ ಬಳಿಕ ಎರಡನೇ ಭಾರಿ ಬಂದಿದ್ದೇನೆ. ಇಲ್ಲಿಗೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದರು.
ಚಾಮರಾಜನಗರ ಜಿಲ್ಲೆ ಒಂದು ಸಣ್ಣ ಜಿಲ್ಲೆ. ಆದರೆ, ಇಲ್ಲಿನ ಜನ ಬಹಳ ಕಷ್ಟ ಜೀವಿಗಳು. ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆ ಬರಬೇಕೆಂಬ ತುಡಿತ ಇರುವ ಜನ. ಕಾಂಗ್ರೆಸ್ ಕೂಡ ರಾಜ್ಯದ ಅಸಮಾನತೆ ತೊಲಗಿಸಬೇಕು, ಸಮಾನತೆ ತರಬೇಕೆಂಬ ಆಸೆಯ ಹೊಂದಿದೆ. ಸಂವಿಧಾನದ ಆಶಯ ಕೂಡ ಅದೇ ಆಗಿದೆ ಎಂದರು.
ಸ್ವಾತಂತ್ರ ಬಂದು 70 ವರ್ಷ ಕಳೆದರೂ ಅಸಮಾನತೆ ತೊಲಗಿಸಲು ಆಗಿಲ್ಲ. ಈ ದೇಶದಲ್ಲಿ ಅಸಮಾನತೆ ಇದೆ ಎಂದರೇ ಅದಕ್ಕೆ ಮನುಸ್ಮೃತಿ, ಜಾತಿ ವ್ಯವಸ್ಥೆ ಕಾರಣ. ಬುದ್ದನ ಕಾಲದಿಂದಲೂ ಇವತ್ತಿನವರೆಗೂ ಪ್ರಯತ್ನ ನಡೆಯುತ್ತಿದೆ. ಆದರೆ ಸಮಾನತೆ ತರಲು ಆಗಿಲ್ಲ. ಸರ್ವರಿಗೂ ಸಮಪಾಲು, ಸಮಬಾಳು ಕೊಡಬೇಕೆಂಬುದು ನಮ್ಮ ಆಶಯ ಎಂದು ಸಿಎಂ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



