ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ!
ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿ ಮುಜುಗರಕ್ಕೊಳಗಾಗಿದ್ದ ಸಂಸದ ಅನಂತಕುಮಾರ್ ಹೆಗಡೆ ಅವರು, ಇದೀಗ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿ ಮುಜುಗರಕ್ಕೊಳಗಾಗಿದ್ದ ಸಂಸದ ಅನಂತಕುಮಾರ್ ಹೆಗಡೆ ಅವರು, ಇದೀಗ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ” ಎಂದು ಹೇಳಿದ್ದಾರೆ.
ವಿವಾದ ಸೃಷ್ಟಿಯಾದರೂ ದೃಢವಾಗಿ ನಿಲ್ಲುವುದು ನಿಜವಾದ ನಾಯಕತ್ವ, ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಕಾರ್ಯಕರ್ತರು ತಲೆಕೆಡಿಸಿಕೊಳ್ಳಬಾರದು.
ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನಿವೆಲ್ಲ ಇದಕ್ಕೆ ವಿಚಲಿತರಾಗಬಾರದು. ನೀವು ಯಾವುದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



