ನಾಳೆ ಪ್ರಧಾನಿ ಮೋದಿ ಶಿವಮೊಗ್ಗ ಭೇಟಿ: 2.5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರುತ್ತಾರೆ ಎಂದರು. ವಿಶಿಷ್ಟ ಯೋಜನೆಯನ್ನು ಮಾಡಿದ್ದು, ಪ್ರಧಾನಿಯವರು ಬೃಹತ್ ಪೆಂಡಾಲ್‍ನಲ್ಲಿ ಜನರನ್ನು ವಾಹನದಲ್ಲಿ ವೀಕ್ಷಿಸುತ್ತ, ಕೈ ಬೀಸುತ್ತ ವೇದಿಕೆಗೆ ಬರುತ್ತಾರೆ ಎಂದು ವಿವರಿಸಿದರು.
ರಾಜ್ಯದಲ್ಲಿ 28ಕ್ಕೆ 28 ಸೀಟು ಗೆಲ್ಲುವುದರ ಕಡೆ ಪಕ್ಷ ಗಮನ ಕೊಡಲಿದೆ. ಸಾರ್ವಜನಿಕರು ಈ ಸಭೆಯನ್ನು ಯಶಸ್ವಿಯಾಗಿ ಮಾಡಬೇಕೆಂದು ಕೋರಿದರು. ವಿಕಸಿತ ಭಾರತ ಸಂಕಲ್ಪಕ್ಕೆ ಜನರು ಸ್ಪಂದಿಸಲು ಮನವಿ ಮಾಡಿದರು. ಇವತ್ತು ಹೋಗಿ ಈಶ್ವರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



