ಕಾಂಗ್ರೆಸ್ ತೆಕ್ಕೆಗೆ ಸದಾನಂದ ಗೌಡ? ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ?
ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದ್ದು, ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬೆಂಗಳೂರು: ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದ್ದು, ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮೈಸೂರಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಡಿವಿ ಸದಾನಂದಗೌಡ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.
ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್‌ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ.

'ಚುನಾವಣೆಗೆ ಸ್ಪರ್ಧಿಸುವಂತೆ ತುಂಬಾ ಹಿಂಸೆ ಕೊಡ್ತಿದ್ದಾರೆ': ರಾಜಕೀಯ ನಿವೃತ್ತಿ ವಾಪಸ್ ಕುರಿತು ಸದಾನಂದಗೌಡ ಹೇಳಿಕೆ!
ಕಾಂಗ್ರೆಸ್ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಈ ಹಿನ್ನೆಲೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಮಾರ್ಚ್ 19 ರಂದು ಸದಾನಂದಗೌಡ ಸುದ್ದಿಗೋಷ್ಟಿ ಕರೆದಿದ್ದು, ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


