ದಶಕಗಳ ಚುನಾವಣಾ ರಾಜಕೀಯಕ್ಕೆ ಶ್ರೀನಿವಾಸ್ ಪ್ರಸಾದ್ ವಿದಾಯ!
ಹಿರಿಯ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್ ಅವರು ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಈ ಹಿಂದೆ ಮೂರು ಬಾರಿ ನಿವೃತ್ತಿ ಘೋಷಿಸಿದ್ದರೂ ಮತ್ತೆ ಮತ್ತೆ ಚುನಾವಣಾ ರಾಜಕಾರಣ ಅವರನ್ನು ಎಳೆದು ತಂದಿತ್ತು.

ಮೈಸೂರು: ಹಿರಿಯ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್ ಅವರು ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಈ ಹಿಂದೆ ಮೂರು ಬಾರಿ ನಿವೃತ್ತಿ ಘೋಷಿಸಿದ್ದರೂ ಮತ್ತೆ ಮತ್ತೆ ಚುನಾವಣಾ ರಾಜಕಾರಣ ಅವರನ್ನು ಎಳೆದು ತಂದಿತ್ತು.
ನಗರದಲ್ಲಿ ಭಾನುವಾರ ತಮ್ಮ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿ ಶ್ರೀನಿವಾಸ್ ಪ್ರಸಾದ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದರು. ಆರು ಬಾರಿ ಸಂಸದ, ಎರಡು ಬಾರಿ ಶಾಸಕ , ಕೇಂದ್ರ ಮತ್ತು ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ.
ರಾಜಕೀಯವು ಸಮಾಜ ಸೇವೆ ಮತ್ತು ಸಾಮಾಜಿಕ ಬದ್ಧತೆಯಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ನಾನು ಅದರಲ್ಲಿ ತೃಪ್ತಿ ಹೊಂದಿದ್ದೇನೆ. ರಾಜಕೀಯವು ಹೊಂದಾಣಿಕೆಗಳ ಸರಣಿಯಾಗಿರಬಹುದು ಆದರೆ ಸ್ವಾಭಿಮಾನಕ್ಕೆ ಬೆಲೆ ಕಟ್ಟಲಾಗದು ಎಂದು ಹೇಳಿದರು.
ನನ್ನ 50 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ನನ್ನ ಸ್ವಾಭಿಮಾನ ಅಥವಾ ತತ್ವಗಳೊಂದಿಗೆ ರಾಜಿ ಮಾಡಿಕೊಂಡಿಲ್ಲ ಎಂದು ಅವರು ಹೇಳಿದರು.
1974 ರಲ್ಲಿ ಮೊದಲ ಬಾರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದಾಗಿನಿಂದ ತಮ್ಮನ್ನು ಬೆಂಬಲಿಸಿದ ತಮ್ಮ ಎಲ್ಲಾ ರಾಜಕೀಯ ಗಾಡ್‌ಫಾದರ್‌ಗಳು, ರೋಲ್ ಮಾಡೆಲ್‌ಗಳು, ಹಿರಿಯ ರಾಜಕೀಯ ಮುಖಂಡರು, ಹಿತೈಷಿಗಳು, ಸ್ನೇಹಿತರು ಮತ್ತು ಜನರಿಗೆ ಕೃತಜ್ಞತೆ ಸಲ್ಲಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



