ಗುಲ್ಬರ್ಗ ಸೇರಿದಂತೆ ಬಿಜೆಪಿಯ 20 ಸ್ಥಾನಗಳಲ್ಲಿ ಕಾಂಗ್ರೆಸ್ ಈ ಬಾರಿ ಗೆಲ್ಲಲಿದೆ: ಡಿಕೆ.ಶಿವಕುಮಾರ್
ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಪ್ರಚಾರ ಆರಂಭಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಗುಲ್ಬರ್ಗ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಬಿಜೆಪಿಯಿಂದ 20 ಸ್ಥಾನಗಳನ್ನು ಕಾಂಗ್ರೆಸ್ ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಪ್ರಚಾರ ಆರಂಭಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಗುಲ್ಬರ್ಗ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಬಿಜೆಪಿಯಿಂದ 20 ಸ್ಥಾನಗಳನ್ನು ಕಾಂಗ್ರೆಸ್ ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ನಾಮನಿರ್ದೇಶನಗೊಂಡ ಎಲ್ಲಾ ನಾಯಕರ ಸಭೆಯನ್ನು ಮಾರ್ಚ್ 21 ರಂದು ಕರೆಯಲಾಗಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಾರ್ಚ್ 19 ಅಥವಾ 20 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಪ್ರಜಾಪ್ರಭುತ್ವ ನಾಶವಾಗುತ್ತದೆ ಎಂದು ಪುನರುಚ್ಚರಿಸಿದರು.
ಪ್ರಧಾನಿ ಮೋದಿಯವರು ಗುಲ್ಬರ್ಗದಿಂದ ತಮ್ಮ ಪಕ್ಷದ ಪ್ರಚಾರವನ್ನು ಪ್ರಾರಂಭಿಸುವುದನ್ನು ನಾನು ಸ್ವಾಗತಿಸುತ್ತೇನೆ. ಅವರ ಒಡೆದು ಆಳುವ ನೀತಿ ಮತ್ತು ರಾಜಕಾರಣದಿಂದ ದೇಶದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿದ್ದಾರೆ. ನಾನು ಇದನ್ನು ಬಹಳ ದಿನಗಳಿಂದ ಹೇಳುತ್ತಿದ್ದೇನೆ. ಪ್ರಜಾಪ್ರಭುತ್ವ ಉಳಿಸಲು ಇದು ಕೊನೆಯ ಚುನಾವಣೆ. ಇದಾದ ನಂತರ ದೇಶದಲ್ಲಿ ಇನ್ನು ಚುನಾವಣೆ ನಡೆಯುವುದಿಲ್ಲ ಎಂದು ಹೇಳಿದರು.
ಐ.ಎನ್.ಡಿ.ಐ.ಎ. ಈ ಬಾರಿ ಎನ್‌ಡಿಎಯನ್ನು ಸೋಲಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಒಗ್ಗಟ್ಟಿನಿಂದ ಹೋರಾಡಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



