ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ತೀವ್ರ ಕಿಡಿ
ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಬೆಂಗಳೂರು: ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ಹಲ್ಲೆ ಘಟನೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣದ ನಂತರ ಇದೀಗ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಆಡಳಿತದ ತುಷ್ಟೀಕರಣ ನೀತಿಗಳು ಕರ್ನಾಟಕವನ್ನು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಹದಗೆಡುವ ಮೂಲಕ ಆಮೂಲಾಗ್ರ ಸ್ಥಿತಿಗೆ ತಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂದೂಗಳು ಮತ್ತು ಹಿಂದೂ ಸಂಸ್ಥೆಗಳ ಮೇಲಿನ ಈ ದಾಳಿಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುತ್ತೇನೆ. ಅವರ ತುಷ್ಟೀಕರಣ ರಾಜಕಾರಣವು ಅನಾಗರಿಕರನ್ನು ರಾಜ್ಯದಲ್ಲಿ ಅಟ್ಟಹಾಸ ನಡೆಸಲು ಪ್ರೋತ್ಸಾಹಿಸಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿಯದೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಮತ್ತು ಸಮಾಜ ವಿರೋಧಿ ಅಂಶಗಳನ್ನು ಕೂಡಲೇ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



