ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ: ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಹನುಮಾನ್ ಚಾಲೀಸಾ-ಆಜಾನ್ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.

ಬೆಂಗಳೂರು: ಹನುಮಾನ್ ಚಾಲೀಸಾ-ಆಜಾನ್ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ ಎಂದು ಹೇಳಿದೆ.
ಈ ತೇಜಸ್ವಿ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು. ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು, ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು. ಆದರೆ ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ. ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ ಎಂದು ಹೇಳಿದೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಗರ್ತಪೇಟೆಯ ಶಾಸಕರು ಬಿಜೆಪಿಯವರೇ, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಬಿಜೆಪಿ ಪ್ರಾಪಗಾಂಡಾಗಳಿಗೆ ತಪರಾಕಿ ನೀಡಿದ್ದಾರೆ, ದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ.
ವೈಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು. ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಷ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



