ರಾಜಕೀಯ

'ಅಸಹಾಯಕ, ದುರ್ಬಲ ಸಿಎಂ': ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಸಿದ್ದರಾಮಯ್ಯ ಈ ರಾಜ್ಯಕಂಡ ಅತ್ಯಂತ ದುರ್ಬಲ ಮತ್ತು ಅಸಹಾಯಕ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

'ಅಸಹಾಯಕ, ದುರ್ಬಲ ಸಿಎಂ': ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ
ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ
Published On :

ಬೆಂಗಳೂರು: ಸಿದ್ದರಾಮಯ್ಯ ಈ ರಾಜ್ಯಕಂಡ ಅತ್ಯಂತ ದುರ್ಬಲ ಮತ್ತು ಅಸಹಾಯಕ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಮುಂದಿನ 5 ವರ್ಷ ಸಿಎಂ ಯಾರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಕಾಲೆಳೆದಿರುವ ಆರ್ ಅಶೋಕ್, 'ಸಿಎಂ ಸಿದ್ದರಾಮಯ್ಯನವರೇ ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು. ಹಾಗೆ ಹರಿಪ್ರಸಾದ್‌ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟೂ ಅಸಹಾಯಕರ ತಾವು ಎಂದು ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್ ಅಶೋಕ್, 'ಡಿಸಿಎಂ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು. ಡಿಸಿಎಂ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು.. ಎಂದು ಟೀಕೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.