ಬಿಜೆಪಿಯ ಒಂದು ನೊಟೀಸ್ ಗೆ ನಾವು 170 ಪುಟಗಳ ಸುದೀರ್ಘ ಉತ್ತರ ನೀಡಿದ್ದೇವೆ: ಎಸ್.ಟಿ. ಸೋಮಶೇಖರ್
ಬಿಜೆಪಿ ನೀಡಿದ 1 ಪುಟದ ನೋಟಿಸ್‌ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ ಎಂದು ರೆಬೆಲ್ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ನೀಡಿದ 1 ಪುಟದ ನೋಟಿಸ್‌ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ ಎಂದು ರೆಬೆಲ್ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೆ ಸದಾಶಿವನಗರ ನಿವಾಸಕ್ಕೆ ಬಿಜೆಪಿ ರೆಬೆಲ್ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಒಂದೇ ಕಾರಿನಲ್ಲಿ ಆಗಮಿಸಿದ್ದರು. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಡಿಸಿಎಂ ಭೇಟಿ ಮಾಡಿದ್ದೇವೆ ಎಂದು ಎಸ್‌ಟಿ ಸೋಮಶೇಖರ್ ಭೇಟಿ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.
ನಂತರ ಬಿಜೆಪಿ ನೊಟೀಸ್ ಗೆ ಸಂಬಂಧಿಸಿದಂತೆ ಮಾತನಾಡಿಡ ಅವರು, ನಮಗೆ ಬಿಜೆಪಿಯವರು ನೀಡಿದ್ದ ನೋಟಿಸ್‌ಗೆ ಸುದೀರ್ಘ ಉತ್ತರ ನೀಡಿದ್ದೇವೆ. ಯಾವ್ಯಾವ ರಾಜ್ಯದಲ್ಲಿ ಕೋರ್ಟ್ ತೀರ್ಪು ಏನು ಬಂದಿದೆ? ಯಾವ್ಯಾವ ರಾಜ್ಯದಲ್ಲಿ ಬಿಜೆಪಿ ಇಂತಹ ವಿಚಾರದಲ್ಲಿ ಯಾವ ನಿರ್ಧಾರ ಕೈಗೊಂಡಿದೆ? ಎಲ್ಲಾ ದಾಖಲೆ ಸೇರಿಸಿ 170 ಪುಟಗಳ ಉತ್ತರ ಕೊಟ್ಟಿದ್ದೇವೆ ಎಂದು ತಿಳಿಸಿದರು.
ಇದೇ ವಿಷಯಕ್ಕೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿದ ಶಿವರಾಂ ಹೆಬ್ಬಾರ್, ಸೋಮಶೇಖರ್ ಅವರದ್ದು ಅಡ್ಡ ಮತದಾನ, ನನ್ನದು ಮತದಾನಕ್ಕೆ ಗೈರು ನೋಟಿಸ್‌ಗೆ ಬೇರೆ ರೀತಿಯ ಉತ್ತರ ಕೊಟ್ಟಿದ್ದೇನೆ. ನನ್ನದು ಸೋಮಶೇಖರ್ ಉತ್ತರಕ್ಕಿಂತ 2 ಪುಟ ಕಡಿಮೆ ಇರಬಹುದು. ಆದರೆ ಎಲ್ಲಾ ದಾಖಲೆ ಸಹಿತ ಉತ್ತರ ಕೊಟ್ಟಿದ್ದೇನೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿ ನಾಯಕರಿಂದ ಸೋಮಶೇಖರ್ ಅಂತರ ಕಾಯ್ದು ಕೊಂಡಿದ್ದಾರೆ. ಬಿಜೆಪಿಯ ಯಾವುದೇ ಸಭೆ, ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಿಲ್ಲ, ಹೀಗಾಗಿ ಅವರು ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



