ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ಜೆಡಿಎಸ್ ಗೂ ಗುಡ್ಬೈ
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ಅಂಗೀಕರಿಸಿದ ಹೊರಟ್ಟಿ, ನಾನು ಎಲ್ಲವನ್ನು ಪ್ರಶ್ನೆ ಮಾಡಿದ್ದೇನೆ. ತಿಬ್ಬೇಗೌಡರು ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು ಎಂದರು. ಅಲ್ಲದೆ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ವಿರುದ್ಧವೂ ತೀವ್ರ ಅಸಮಾಧಾನ ಹೊರಹಾಕಿದ್ದು, ಜೆಡಿಎಸ್ ಗೂ ಗುಡ್ಬೈ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



