ರಾಜಕೀಯ

ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ: ಮೋದಿ ಮತ್ತೆ ಪ್ರಧಾನಿಯಾಗಲು ದೇಶ ಬಯಸುತ್ತಿದೆ- ಬಿ.ವೈ. ವಿಜಯೇಂದ್ರ

ಲೋಕಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ ಪಕ್ಷದ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿದರು.

ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ: ಮೋದಿ ಮತ್ತೆ ಪ್ರಧಾನಿಯಾಗಲು ದೇಶ ಬಯಸುತ್ತಿದೆ- ಬಿ.ವೈ. ವಿಜಯೇಂದ್ರ
ಬಿವೈ ವಿಜಯೇಂದ್ರ, ಆರ್ ಅಶೋಕ್ ಮತ್ತಿತರರು
Published On :

ಬೆಂಗಳೂರು: ಲೋಕಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ ಪಕ್ಷದ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ವಿಜಯೇಂದ್ರ ಇನ್ನೊಂದು ಬಾರಿ ಮೋದಿ ಎಂಬುದು ಬಿಜೆಪಿ ಕಾರ್ಯಕರ್ತರ ಮಾತು ಮಾತ್ರವಲ್ಲ,ಭಾರತದ ಜನರು ಮೋದಿ ಅವರನ್ನು ಪ್ರಧಾನಿಯಾಗಲು ಬಯಸುತ್ತಾರೆ. ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಏರುತ್ತಿದೆ. ಮೋದಿ ಅವರಲ್ಲಿ ಭಾರತದ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಅಭಿವೃದ್ಧಿ ಅವರ ದೂರದೃಷ್ಟಿಯಾಗಿದೆ ಎಂದರು.

ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಆಗಿದೆ. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳಿಲ್ಲ ಮತ್ತು ಜೆಡಿಎಸ್‌ ಕೂಡ ತಮ್ಮೊಂದಿಗೆ ಇದೆ ಎಂದು ತಿಳಿಸಿದರು.

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಟ್ಟಾಗಿ ಹೋರಾಡಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸೋಲು ಕಂಡಿದ್ದವು. ಬಿಜೆಪಿ ದಾಖಲೆಯ 25 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನವನ್ನು ಮಾತ್ರ ಗೆದಿದ್ದವು. ನಿನ್ನೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.