ರಾಜಕೀಯ

ಶೆಟ್ಟರ್‌ ಬಳಿಕ ಜನಾರ್ದನ ರೆಡ್ಡಿ ಮರಳಿ ಗೂಡಿಗೆ: ಘರ್ ವಾಪ್ಸಿಗೆ ಮುಹೂರ್ತ ಫಿಕ್ಸ್?

ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾಗುವುದು ಖಾತ್ರಿಯಾಗಿದೆ.

ಶೆಟ್ಟರ್‌ ಬಳಿಕ ಜನಾರ್ದನ ರೆಡ್ಡಿ ಮರಳಿ ಗೂಡಿಗೆ: ಘರ್ ವಾಪ್ಸಿಗೆ ಮುಹೂರ್ತ ಫಿಕ್ಸ್?
ಜನಾರ್ದನ ರೆಡ್ಡಿ
Published On :

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾಗುವುದು ಖಾತ್ರಿಯಾಗಿದೆ.

ಪಕ್ಷ ಸೇರ್ಪಡೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಸೋಮವಾರ ಬಿಜೆಪಿ ಸೇರ್ಪಡೆಯಾಗಲು ಸಜ್ಜಾಗಿದ್ದಾರೆಂದು ತಿಳಿದುಬಂದಿದೆ.

ಜನಾರ್ನದ ರೆಡ್ಡಿ ಅವರು, ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು, ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ರಾಜ್ಯಸಭೆ ಚುನಾವಣೆಯ ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿದ್ದ ಜನಾರ್ದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಆದರೆ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ ಒಪ್ಪಿಗೆ ಸೂಚಿಸಿರಲಿಲ್ಲ. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.