ಅಪ್ಪ ಬಿಜೆಪಿ, ಮಗಳು ಕಾಂಗ್ರೆಸ್: ಸಿಪಿ ಯೋಗೇಶ್ವರ್ ಪುತ್ರಿ ನಿಶಾ 'ಕೈ' ಹಿಡಿಯುವುದು ಫಿಕ್ಸ್!
ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.

ಬೆಂಗಳೂರು: ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಸ್ವತಃ ನಿಶಾ ಯೋಗೇಶ್ವರ್ ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ತಂದೆ ಸಿ ಪಿ ಯೋಗೇಶ್ವರ್ ಈ ಹಿಂದೆ ಕಾಂಗ್ರೆಸ್ ನಲ್ಲಿದ್ದರು, ಅನಂತರ ಬಿಜೆಪಿ ಸೇರಿದ್ದರು. ಸದ್ಯ ಬಿಜೆಪಿ ಎಂಎಲ್ ಸಿ ಯಾಗಿದ್ದಾರೆ. ತಂದೆಯ ರಾಜಕೀಯ ಹಾದಿಯನ್ನು ಬಿಟ್ಟು ಭಿನ್ನ ದಾರಿಯಲ್ಲಿ ಹೋಗಲು ನಿಶಾ ಮುಂದಾಗಿದ್ದಾರೆ.
ಹಲವು ಬಾರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಅವರನ್ನು ಭೇಟಿ ಮಾಡಿದ್ದ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವ ಬಗ್ಗೆ ಒಲವು ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿಯೂ ಕೂಡ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಕೂಡ ಮಾಹಿತಿ ನೀಡಿದ್ದರು. ನಿಶಾ ಅವರು ಕಾಂಗ್ರೆಸ್ ಸೇರುವ ಬಗ್ಗೆ ಹಲವು ಬಾರಿ ಮಾತನಾಡಿದ್ದಾರೆ.
ಈ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದರು. ತಾವು ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ಇದಕ್ಕೆ ತಮ್ಮ ತಂದೆಯ ಸಹಮತ ಕೂಡ ಇದೆ. ಕಾಂಗ್ರೆಸ್ ಸೇರ್ಪಡೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದಿದ್ದಾರೆ.
ಚನ್ನಪಟ್ಟಣದ ಎಲ್ಲ ಜನರು ನನ್ನವರೇ, ಅದರಲ್ಲಿ ಅವರು ಇವರು ಅಂತಾ ಏನಿಲ್ಲ. ನಾನು ಇಲ್ಲಿಯೇ ಬೆಳೆದಿದ್ದು, ಅವರ ಮನೆ ಮಗಳಾಗಿ ಚನ್ನಪಟ್ಟಣದ ಜನರ ನಡುವೆ ನಾನು ಬೆಳೆದಿದ್ದೇನೆ ಎಂದು ನಿಶಾ ಯೋಗೇಶ್ವರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



