ಚಿಕ್ಕಬಳ್ಳಾಪುರದಲ್ಲಿ NDAಗೆ ಹಿನ್ನಡೆ: HDK ಆಪ್ತ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಗೆ ಸೇರ್ಪಡೆ
ಲೋಕಸಭೆ ಚುನಾವಣೆಗೂ ಮುನ್ನ ಚಿಕ್ಕಬಳ್ಳಾಪುರದಲ್ಲಿ NDA ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಹಾಗೂ ಬೆಂಬಲಿಗರು ಇಂದು ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಗೂ ಮುನ್ನ ಚಿಕ್ಕಬಳ್ಳಾಪುರದಲ್ಲಿ NDA ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಹಾಗೂ ಬೆಂಬಲಿಗರು ಇಂದು ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಕೆ.ಪಿ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಮೈತ್ರಿ ಅಭ್ಯರ್ಥಿಯಾಗಿ ಡಾ.ಕೆ ಸುಧಾಕರ್ಗೆ ಟಿಕೆಟ್ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ಗೆ ಸೇರಿದ್ದಾರೆ. ಬಚ್ಚೇಗೌಡ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್ ಸೇರಿದ್ದು ಇನ್ನು ಏಪ್ರಿಲ್ 2ರಂದು ಅಧಿಕೃತವಾಗಿ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.
ಜೆಡಿಎಸ್ ನಾಯಕರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನಮ್ಮ ರಾಜಕೀಯ ಎದುರಾಳಿ ಡಾ. ಕೆ ಸುಧಾಕರ್ ಪರ ನಾನು ನಿಲ್ಲುವುದಿಲ್ಲ. ಹೀಗಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಕೆ.ಪಿ ಬಚ್ಚೇಗೌಡ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



