ರಾಜಕೀಯ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್- ಕುಮಾರಸ್ವಾಮಿ ಭೇಟಿ, ಮಹತ್ವದ ಮಾತುಕತೆ!

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್- ಕುಮಾರಸ್ವಾಮಿ ಭೇಟಿ, ಮಹತ್ವದ ಮಾತುಕತೆ!
ಕುಮಾರಸ್ವಾಮಿ- ಸುಮಲತಾ, ಅಭಿಷೇಕ್
Published On :

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅಂಬರೀಶ್ ಅಣ್ಣನ ಮನೆ ನನಗೆ ಹೊಸದೇನೂ ಅಲ್ಲ. ನಾನು ಅಂಬರೀಶ್ ಒಟ್ಟಿಗೆ ಉಂಡು, ಬೆಳೆದವರು. ಸುಮಲತಾ ಅವರೊಂದಿಗೆ ಭೇಟಿ ಅತ್ಯಂತ ಸೌಹಾರ್ದಯುತವಾಗಿತ್ತು. ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು, ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದು, ಬೆಂಬಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಕುಮಾರಸ್ವಾಮಿ ಅವರೊಂದಿಗೆ ಆರೋಗ್ಯಕರ ಚರ್ಚೆಯಾಗಿದೆ. ಹಳೆಯದನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಮಂಡ್ಯ ಕ್ಷೇತ್ರದಲ್ಲಿ ಸಹಕಾರ ನೀಡುವಂತೆ ಕೋರಿದ್ದಾರೆ. ಏಪ್ರಿಲ್ 3 ರಂದು ಮಂಡ್ಯದಲ್ಲಿ ಸಭೆ ಕರೆದಿರುವ ಬಗ್ಗೆ ಅವರಿಗೆ ಹೇಳಿದ್ದೇನೆ. ಅಂದಿನ ಸಭೆಯಲ್ಲಿ ದರ್ಶನ್, ಅಭಿಷೇಕ್ ಇರಲಿದ್ದು, ಬೆಂಬಲಿಗರು, ಹಿತೈಷಿಗಳೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿರುವುದಾಗಿ ಸುಮಲತಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.