ರಾಜಕೀಯ

ಲೋಕಸಭಾ ಚುನಾವಣೆ: ಚಿಕ್ಕೋಡಿ ಸೇರಿದಂತೆ ಆರು ಕ್ಷೇತ್ರಗಳ ಆಕಾಂಕ್ಷಿಗಳಿಂದ ಪ್ರಜಾಕೀಯ ಅರ್ಜಿ ಆಹ್ವಾನ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಜಾಕೀಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಇದಕ್ಕಾಗಿ ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.

ಲೋಕಸಭಾ ಚುನಾವಣೆ: ಚಿಕ್ಕೋಡಿ ಸೇರಿದಂತೆ ಆರು ಕ್ಷೇತ್ರಗಳ ಆಕಾಂಕ್ಷಿಗಳಿಂದ ಪ್ರಜಾಕೀಯ ಅರ್ಜಿ ಆಹ್ವಾನ
ಪ್ರಜಾಕೀಯ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಜಾಕೀಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಇದಕ್ಕಾಗಿ ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಚಿಕ್ಕೋಡಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳ ಆಸಕ್ತ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಜಾಕೀಯ ಸಂಸ್ಥಾಪಕ, ನಟ ಉಪೇಂದ್ರ, ಆಸಕ್ತ ಆಕಾಂಕ್ಷಿಗಳು ತಮ್ಮ ಎಲ್ಲಾ ಮಾಹಿತಿಗಳೊಂದಿಗೆ ಈ ಕೂಡಲೇ http://prajaakeeya.org ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನ ಎಂದಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಏಪ್ರಿಲ್ 7 ರಂದು ಪಕ್ಷದ ವತಿಯಿಂದ ಬಿ ಫಾರಂ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.