ರಾಜಕೀಯ

ಲೋಕಸಭಾ ಚುನಾವಣೆ: ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ- ಡಿಸಿಎಂ ಡಿ ಕೆ ಶಿವಕುಮಾರ್

ಮುಂಬರುವ ಲೋಕಸಭೆ ಚುನಾವಣೆಯ ನಂತರ INDIA ಮೈತ್ರಿಕೂಟದೊಂದಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದ್ದು, ದೇಶದಲ್ಲಿ ಆಡಳಿತ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾನುವಾರ ಪ್ರತಿಪಾದಿಸಿದ್ದಾರೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ- ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Published On :

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ನಂತರ INDIA ಮೈತ್ರಿಕೂಟದೊಂದಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದ್ದು, ದೇಶದಲ್ಲಿ ಆಡಳಿತ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾನುವಾರ ಪ್ರತಿಪಾದಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್,"ನನ್ನ ಅಭಿಪ್ರಾಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತು INDIAಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು ಎಂದರು.

ಜೂನ್ 3 ರಂದು ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ-ಜೆಡಿ (ಎಸ್) ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳ ಜೊತೆಗೆ ಚರ್ಚೆ ಮಾಡಿದ್ದೇವೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇನ್ನು ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ. ಲೋಕಸಭೆ ಚುನಾವಣೆ ಮಾದರಿಯಲ್ಲಿ ಈ ಚುನಾವಣೆ ಎದುರಿಸುತ್ತೇವೆ ಎಂದರು.

ಇತ್ತೀಚೆಗಷ್ಟೇ ಜೆಡಿಎಸ್ ತೊರೆದಿದ್ದ ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ ಅವರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಪಕ್ಷ ಇಂದು ಘೋಷಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.