ರಾಜಕೀಯ

ಪೆನ್ ಡ್ರೈವ್ ಸಿಎಂಗೆ ಹಸ್ತಾಂತರಿಸಿ ತನಿಖೆಗೆ ಸಹಕರಿಸಿ: HDK ಗೆ ಸಚಿವ ಸತೀಶ್ ಜಾರಕಿಹೊಳಿ

ಮಹತ್ವದ ದಾಖಲೆಯಿರುವ ಪೆನ್‌ಡ್ರೈವ್‌ ಇದೆ ಎಂದು ಪದೇ ಪದೇ ಹೇಳಿಕೊಳ್ಳುವ ಬದಲು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಅದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ, ತನಿಖೆಗೆ ಸಹಕರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.

ಪೆನ್ ಡ್ರೈವ್ ಸಿಎಂಗೆ ಹಸ್ತಾಂತರಿಸಿ ತನಿಖೆಗೆ ಸಹಕರಿಸಿ: HDK ಗೆ ಸಚಿವ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Published On :

ಬೆಳಗಾವಿ: ಮಹತ್ವದ ದಾಖಲೆಯಿರುವ ಪೆನ್‌ಡ್ರೈವ್‌ ಇದೆ ಎಂದು ಪದೇ ಪದೇ ಹೇಳಿಕೊಳ್ಳುವ ಬದಲು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಅದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ, ತನಿಖೆಗೆ ಸಹಕರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ ಡ್ರೈವ್ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ. ಕುಮಾರಸ್ವಾಮಿ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದರ ಕುರಿತು ಸಾಕ್ಷಿ ಇದ್ದರೆ, ನಮ್ಮ ಸಿಎಂಗೆ ನೀಡಲಿ. ಸಿಎಂ ಅವರು ಕುಮಾರಸ್ವಾಮಿಯವರಿಗೆ ಬಹಳ ಪರಿಚಯವಿದ್ದವರೇ. ಹೀಗಾಗಿ ಪೆನ್ ಡ್ರೈವ್ ಕುರಿತು ಯಾವುದೇ ಸಾಕ್ಷಿ ಇದ್ದರೆ ನೀಡಲಿ ಎಂದು ಹೇಳಿದರು.

ಸಾಕ್ಷಿ ನೀಡದೇ ತನಿಖೆ ನಡೆಸಿ ಎಂದರೆ ಹೇಗೆ? ಅದೇ ಏನೋ ಅಂತಾರಲ್ಲ. ಕೆರೆಯಲ್ಲಿ ಎಮ್ಮಿ ಮುಳುಗಿಸಿ ವ್ಯಾಪಾರ ಮಾಡಿದ್ದರಂತೆ ಎಂಬಂತೆ ಎಚ್ಡಿಕೆ ಮಾತಿನ ದಾಟಿ ಇದೇ ರೀತಿ ಆಗಿದೆ. ಆದ್ದರಿಂದ ಸಮರ್ಪಕವಾಗಿ ಪ್ರಕರಣದ ತನಿಖೆ ನಡೆಸಲು ಅವರ ಬಳಿರುವ ಸಾಕ್ಷಿಗಳನ್ನು ನೀಡಿದರೆ ಸಂಪೂರ್ಣವಾಗಿ ನಿಸ್ಪಕ್ಷವಾಗಿ ತನಿಖೆ ನಡೆಸಲಾಗುವುದು ಎಂದು ಚಾಟಿ ಬೀಸಿದರು.

ಇದೇ ವೇಳೆ ಪರಮೇಶ್ವರ್ ಭೇಟಿ ಕುರಿು ಮಾತನಾಡಿ, ಭೇಟಿಯಲ್ಲಿ ವಿಶೇಷತೆ ಏನು ಇಲ್ಲ. ಚುನಾವಣೆ ವಿಚಾರವಾಗಿ ಮಾತುಕತೆ ಮಾಡಿದ್ದೇವೆ. ಎಷ್ಟು ಸೀಟ್ ಗೆಲ್ಲುತ್ತೇವೆ ಎಂಬ ಚರ್ಚೆ ಮಾಡಿದ್ದೇವೆ. ಡಿಸಿಎಂ ಬಗ್ಗೆ ಚುನಾವಣೆ ವೇಳೆ ಕೂಗು ಇತ್ತು. ಈಗ ಚುನಾವಣೆ ಮುಗಿದಿದೆ. ಚುನಾವಣೆಗೆ ಅನುಕೂಲ ಆಗಲಿ ಅಂತ ಕೂಗು ‌ಇತ್ತು. ಈಗ ಡಿಸಿಎಂ ಕೂಗು ಇಲ್ಲ. ಸರ್ಕಾರ ಬಿಳಿಸಲು ಸುಮ್ಮನೆ ಹೇಳುತ್ತಾರೆ. ಸರ್ಕಾರ ಏನು ಬಿದ್ದು ಹೋಯ್ತಾ. ಸುಮ್ಮನೆ ಸರ್ಕಾರ ಬಿಳುತ್ತೆ‌ ಅಂತಾರೆ. ಶಾಸಕರ ಅಸಮಧಾನ ಇದ್ದೆ ಇರುತ್ತೆ. ಆಡಳಿತ ಪಕ್ಷ ಅಂದ ಮೇಲೆ ಅಸಮಧಾನ ಸಹಜ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.