ರಾಜಕೀಯ

ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳುಕ ಸಂಪುಟ ಪುನರ್‌ರಚನೆ ಸಾಧ್ಯತೆಗಳಿವೆ ಎಂದು ತೋಟಗಾರಿಕಾ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಅವರು ಸೋಮವಾರ ಹೇಳಿದರು.

ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್
ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್
Published On :

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ಪುನರ್‌ರಚನೆ ಸಾಧ್ಯತೆಗಳಿವೆ ಎಂದು ತೋಟಗಾರಿಕಾ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್‌ರಚನೆ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಈ ಕುರಿತು ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಪುನರ್‌ರಚನೆ ಆಗಬಹುದು ಎನ್ನುವ ಮೂಲಕ ಸಾಧ್ಯತೆಗಳ ಸುಳಿವು ನೀಡಿದರು.

ಚನ್ನಗಿರಿ ಲಾಕಪ್‌ ಸಾವು ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಲೋಪ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರಗಳಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಬಿಜೆಪಿ ಮೊದಲು ದೆಹಲಿಯ ವ್ಯವಸ್ಥೆ ಸರಿ ಮಾಡಲಿ ಎಂದು ಹೇಳಿದರು.

ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ಇರುವಷ್ಟೂ ದಿನ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.