ರಾಜಕೀಯ

ಕಟುಕರಿಗೆ ಕಣ್ಣೀರು ಬರದು, ಮಾತೃ ಹೃದಯ ಇದ್ದವರಿಗೆ ಬರುತ್ತೆ: ನಿಖಿಲ್ ಬಗ್ಗೆ ವ್ಯಂಗ್ಯವಾಡಿದವರಿಗೆ ಕುಮಾರಸ್ವಾಮಿ ತಿರುಗೇಟು

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ‌.ಕುಮಾರಸ್ವಾಮಿ, 'ಕಟುಕರಿಗೆ ಕಣ್ಣೀರು ಬರುವುದಿಲ್ಲ' ಎಂದು ಹೇಳಿದರು.

ಕಟುಕರಿಗೆ ಕಣ್ಣೀರು ಬರದು, ಮಾತೃ ಹೃದಯ ಇದ್ದವರಿಗೆ ಬರುತ್ತೆ: ನಿಖಿಲ್ ಬಗ್ಗೆ ವ್ಯಂಗ್ಯವಾಡಿದವರಿಗೆ ಕುಮಾರಸ್ವಾಮಿ ತಿರುಗೇಟು
ಚಾಮುಂಡೇಶ್ವರಿ ದೇವಾಲಯದಲ್ಲಿ ಎಚ್.ಡಿ ಕುಮಾರಸ್ವಾಮಿ
Published On :

ಮೈಸೂರು: ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ‌.ಕುಮಾರಸ್ವಾಮಿ, 'ಕಟುಕರಿಗೆ ಕಣ್ಣೀರು ಬರುವುದಿಲ್ಲ' ಎಂದು ಹೇಳಿದರು. ರಾಜಕಾರಣದಲ್ಲಿ ಕೆಲವರು ಕಟುಕರಿದ್ದಾರೆ. ಅವರಿಗೆ ಕಣ್ಣೀರು ಬರುವುದಿಲ್ಲ. ಭಯ-ಭಕ್ತಿ ಇಲ್ಲದ ಅವರಿಗೆ ಕಣ್ಣೀರು ಬಾರದು. ನಮಗೆ ಜನರ ಕಷ್ಟ ನೋಡಿದರೆ ಕಣ್ಣೀರು ಬರುತ್ತದೆ ಎಂದರು.

ನಾನೂ ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಅದನ್ನು ಮಾಡಿರುವುದು ಅನುಕಂಪ‌ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ, ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ ಎಂದರು. ಪ್ರಧಾನಿ ಮೋದಿ ಬಗ್ಗೆ ರಾಜಕೀಯ ಪುಡಾರಿ ಎಂಬ ಸಿಎಂ ಟೀಕೆ ವಿಚಾರಕ್ಕೆ ಉತ್ತರಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಯಾವ ರೀತಿ ಮಾತನಾಡುತ್ತಿದ್ದಾರೆ? ಅವರನ್ನ ಪುಡಾರಿ ಅನ್ನೋದಾದ್ರೆ ಇವರು ಅದೇ ರೀತಿ ಅಲ್ಲವೇ ಮಾತನಾಡುತ್ತಿರೋದು ಎಂದು ಕುಟುಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.