ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಸಿದ್ದರಾಮಯ್ಯ ಹಾಜರು; ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಸಿಎಂ ಸ್ಥಾನದಿಂದ ಕೆಳಗಿಳಿದು ತನಿಖೆ ಎದುರಿಸುವಂತೆ ಒತ್ತಾಯಿಸಿದರು.
ಹಾಲಿ ಮುಖ್ಯಮಂತ್ರಿಯ ವಿರುದ್ಧ ನ್ಯಾಯಯುತ ತನಿಖೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆದರೆ ರಾಜೀನಾಮೆ ನೀಡದೇ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಲೋಕಾಯುಕ್ತ ತನಿಖೆ ನಡೆಯುತ್ತಿರುವ ರೀತಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಶ್ರೀವತ್ಸ ಅವರು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ತಮಗೆ ಪ್ರತಿಭಟನೆ ನಡೆಸಲು ಪೊಲೀಸರು ಬಿಡುತ್ತಿಲ್ಲ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



