JPC ಅಧ್ಯಕ್ಷರಿಂದ ವಕ್ಫ್ ಕಾಯ್ದೆಗೆ ತಿದ್ದುಪಡಿ ಭರವಸೆ: ಯತ್ನಾಳ್ ಅನಿರ್ದಿಷ್ಟಾವಧಿ ಧರಣಿ ಅಂತ್ಯ
ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿದರು.

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 'ವಕ್ಫ್ ಹಠಾವೋ, ದೇಶ ಬಚಾವೋ' ಎಂಬ ಘೋಷಣೆಯೊಂದಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಗುರುವಾರ ಅಂತ್ಯವಾಗಿದೆ.
ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿ, ವಕ್ಪ್ ಬೋರ್ಡ್ ಸಮಸ್ಯೆ ಆಲಿಸಿ ಅಹವಾಲು ಸ್ವೀಕರಿಸಿದರು. ಅಲ್ಲದೆ ಎಲ್ಲಾ ಸಮಸ್ಯೆಗಳಿಗೆ ಹೊಸ ವಕ್ಪ್ ತಿದ್ದುಪಡಿ ಕಾಯ್ದೆ ಮೂಲಕ ಪರಿಹಾರ ನೀಡುವ ಭರವಸೆ ನೀಡಿದ ನಂತರ ಧರಣಿ ಹಿಂಪಡೆಯಲಾಯಿತು.
ಈ ವೇಳೆ ಮಾತನಾಡ ಪಾಲ್ ಅವರು, ಜೆಪಿಸಿ ಮೂಲಕ ವಕ್ಪ್ ಕಾಯ್ದೆಗೆ ಪಾರದರ್ಶಕ ತಿದ್ದುಪಡಿ ತರಲಾಗುವುದು. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಭವಿಷ್ಯದಲ್ಲಿ ವಕ್ಪ್ ನಿಂದ ರೈತರಿಗೆ, ಮಠ, ಮಂದಿರ, ಐತಿಹಾಸಿಕ ಸ್ಮಾರಕ ಸೇರಿದಂತೆ ಯಾರಿಗೂ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ತರಲು ಜೆಪಿಸಿ ಪೂರಕ ಸಲಹೆ ನೀಡಲಿದೆ ಎಂದು ಹೇಳಿದರು.
ಅಗತ್ಯಬಿದ್ದರೆ ರೈತರಿಗೆ ನೋಟಿಸ್ ನೀಡಿರುವ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಕ್ಫ್ ಬೋರ್ಡ್ ಅಧಿಕಾರಿಗಳನ್ನು ದೆಹಲಿಗೆ ಕರೆಯಿಸಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪಾಲ್ ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



