ಚುನಾವಣೆಗಾಗಿ ಮೋದಿ ಹೆಸರಲ್ಲಿ ಉಕ್ಕು ಕಂಪನಿಗಳಿಂದ ಕುಮಾರಸ್ವಾಮಿ 1 ಸಾವಿರ ಕೋಟಿ ರೂ ಹಣ ಸಂಗ್ರಹ: ಚಲುವರಾಯಸ್ವಾಮಿ
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗಳನ್ನು ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ ಮಿತ್ರ ಪಕ್ಷಗಳು ವಾಮಮಾರ್ಗ ಹಿಡಿದಿವೆ. ಅಲ್ಲಿ ಹಣದ ಹೊಳೆಯನ್ನೇ ಹರಿಸಲು ಎಲ್ಲ ತಯಾರಿ ನಡೆಸಿಕೊಂಡಿದೆ.

ಬೆಂಗಳೂರು: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪಚುನಾವಣೆಗಾಗಿ ಉಕ್ಕು ಕಂಪನಿಗಳಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ 1000 ಕೋಟಿ ರು. ಹಣ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ.
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗಳನ್ನು ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ ಮಿತ್ರ ಪಕ್ಷಗಳು ವಾಮಮಾರ್ಗ ಹಿಡಿದಿವೆ. ಅಲ್ಲಿ ಹಣದ ಹೊಳೆಯನ್ನೇ ಹರಿಸಲು ಎಲ್ಲ ತಯಾರಿ ನಡೆಸಿಕೊಂಡಿದೆ. ಮಾತ್ರವಲ್ಲ, ಕರ್ನಾಟಕದ ಉಪಚುನಾವಣೆಯಲ್ಲಿ ಮುಖ್ಯವಾಗಿ ಚನ್ನಪಟ್ಟಣದಲ್ಲಿ ಸೋಲಿನ ಭೀತಿ ಹೊಂದಿರುವ ಬಿಜೆಪಿ ಇಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಹಣ ಸುರಿಯಲು ಮುಂದಾಗಿದೆ. ಚುನಾವಣೆಗಳ ಜವಾಬ್ದಾರಿ ಹೊತ್ತಿರುವ ಕುಮಾರಸ್ವಾಮಿ ಅವರು ಭಾರತದ ವಿವಿಧೆಡೆ ಮತ್ತು ರಾಜ್ಯದ ಉಕ್ಕು ಕಂಪನಿಗಳಿಂದ ಹಣ ಸಂಗ್ರಹಿಸಿದ್ದಾರೆ ಎಂದು ದೂರಿದ್ದಾರೆ.
ಉಕ್ಕಿನ ಕೈಗಾರಿಕೆಗಳಿಂದ ಹಣ ಸಂಗ್ರಹಿಸಿರುವ ಬಗ್ಗೆ ನಮಗೆ ಆಂತರಿಕ ಮಾಹಿತಿ ಬಂದಿದೆ. ಮಾತ್ರವಲ್ಲ ಉಕ್ಕಿನ ಕೈಗಾರಿಕೋದ್ಯಮಿಗಳೂ ಈ ಕುರಿತು ಮಾಹಿತಿ ನೀಡಿದ್ದಾರೆ. ಇದು ರಾಷ್ಟ್ರದ ಬಹುದೊಡ್ಡ ಹಗರಣವಾಗಿದ್ದು, ಇ.ಡಿ., ಮುಂತಾದ ತನಿಖಾ ಸಂಸ್ಥೆಗಳು ಇಂಥ ವಿಷಯವನ್ನು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ, ಗೋವಾದಲ್ಲಿ ಆಪರೇಶನ್ ಮಾಡಿ ಎಕ್ಸ್‌ಪರ್ಟ್ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಚನ್ನಪಟ್ಟಣ ಕ್ಷೇತ್ರವನ್ನು ಗೆಲ್ಲಬೇಕೆಂಬ ಹಠದಿಂದ ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಗಟ್ಟನ್ನೇ ಅಲುಗಾಡಿಸಲು ಹೊರಟಿದೆ’ ಎಂದು ಆರೋಪಿಸಿರುವ ಅವರು, ‘ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದೂ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



