ಕಾಂಗ್ರೆಸ್ ನಾಯಕರು ಸ್ವಾಭಿಮಾನಿಗಳು, BJP 50 ಕೋಟಿ ರೂ ಆಫರ್‌ಗೆ ಎಂದಿಗೂ ಬೀಳಲ್ಲ: ಸವದಿ
ಮುಖ್ಯಮಂತ್ರಿಯವರು ಹೀಗೆ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷ್ಯ ಇರಬಹುದು. ಅದಕ್ಕೆ ಅವರು ಹೇಳಿರಬಹುದು. ಏನೇ ಮಾಡಿದರೂ ಬಿಜೆಪಿಯವರ ಕನಸು ನನಸಾಗದು.

ಕಾಗವಾಡ: ಕಾಂಗ್ರೆಸ್ ಶಾಸಕರು ಸ್ವಾಭಿಮಾನಿಗಳು. 50 ಕೋಟಿ ಅಲ್ಲ, 100 ಕೋಟಿ ರೂ. ಕೊಟ್ಟರೂ ಯಾರೂ ಬಿಜೆಪಿ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಶುಕ್ರವಾರ ಹೇಳಿದರು.
ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ತಲಾ ರೂ.50 ಕೋಟಿ ಆಮಿಷ ಒಡ್ಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಯವರು ಹೀಗೆ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷ್ಯ ಇರಬಹುದು. ಅದಕ್ಕೆ ಅವರು ಹೇಳಿರಬಹುದು. ‘ಏನೇ ಮಾಡಿದರೂ ಬಿಜೆಪಿಯವರ ಕನಸು ನನಸಾಗದು ಎಂದು ಹೇಳಿದರು.
ನಮ್ಮ ಶಾಸಕರನ್ನು ಖರೀದಿಸಲು ಯಾರಿಗೂ ಸಾಧ್ಯವಿಲ್ಲ, ಏಕೆಂದರೆಯ ಅವರೆಲ್ಲರೂ ಸ್ವಾಭಿಮಾನಿಗಳು, ಪಕ್ಷದ ಸಮರ್ಪಿತ ಕಾರ್ಯಕರ್ತರಾಗಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರಬಹುದು, ಆದರೆ, ಯಾವುದೇ ಸಂದರ್ಭದಲ್ಲೂ ಈ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಇಂತಹ ಪ್ರಯತ್ನಗಳಿಗೆ ನಮ್ಮ ನಾಯಕರು ಬೀಳುವುದಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



